Monday, January 2, 2012

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ 

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ.ರಾಜೀವ್ ಶುಕ್ಲಾರವರು ಇದೇ ತಿಂಗಳ 2ನೇ ಜನವರಿ 2012, ಸೋಮವಾರದಂದು ಕುಟುಂಬ ಸಮೇತರಾಗಿ ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷರಾದ ಶ್ರೀ.ಜಯಂತ್ ಸಾಸನೆಯವರು ಕೂಡ ಉಪಸ್ಥಿತರಿದ್ದರು. 


ಶಿರಡಿ ಸಾಯಿಬಾಬಾರವರ ಸಮಾಧಿಯ ದರ್ಶನದ ನಂತರ, ಸಚಿವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷರಾದ ಶ್ರೀ.ಜಯಂತ್ ಸಾಸನೆಯವರು ಸನ್ಮಾನಿಸಿದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment