Saturday, March 26, 2011

ಮೊದಲನೇ ವಾರ್ಷಿಕೋತ್ಸವ ಆಚರಿಸಿಕೊಂಡ ಬೆಂಗಳೂರಿನ ಶ್ರೀ ಸಾಯಿ ಧನ್ವಂತರಿ ಧ್ಯಾನ ಮಂದಿರ - 26ನೇ ಮಾರ್ಚ್ 2011   ಕೃಪೆ: ಸಾಯಿಅಮೃತಧಾರಾ.ಕಾಂ 

ಬೆಂಗಳೂರಿನ ಜಯನಗರದಲ್ಲಿರುವ ಶ್ರೀ ಸಾಯಿ ಧನ್ವಂತರಿ ಧ್ಯಾನ ಮಂದಿರವು ತನ್ನ ಪ್ರಥಮ ವಾರ್ಷಿಕೋತ್ಸವವನ್ನು  ಇದೇ ತಿಂಗಳ 19 ಮತ್ತು 20ನೇ ಮಾರ್ಚ್ 2011 ರಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಿಕೊಂಡಿತು. 19ನೇ ಮಾರ್ಚ್ 2011 ರಂದು ಬೆಳಗಿನ ಕಾಕಡಾ ಆರತಿಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಆರತಿಯ ನಂತರ ಸಾಯಿಭಕ್ತರು ವಿವಿಧ ಭಾಷೆಗಳ ಸಾಯಿ ಸಚ್ಚರಿತೆಯ ಪಾರಾಯಣವನ್ನು ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಮಾಡಿದರು. ಸಂಜೆ ಪಾರಾಯಣ ಮುಕ್ತಾಯವಾದ ನಂತರ ಸಾಯಿಬಾಬಾರವರ ಪಲ್ಲಕ್ಕಿಯ ಉತ್ಸವವನ್ನು ಆಯೋಜಿಸಲಾಗಿತ್ತು. ಮಾರನೇ ದಿವಸ ಅಂದರೆ 20 ನೇ ಮಾರ್ಚ್ 2011 ರಂದು ಬೆಳಿಗ್ಗೆ 8 ಘಂಟೆಯಿಂದ ರಾತ್ರಿ 8 ಘಂಟೆಯವರೆಗೆ ಅಖಂಡ ಸಾಯಿ ನಾಮ ಜಪವಾದ "ಓಂ ಸಾಯಿ ಶ್ರೀ ಸಾಯಿ ಜಯ ಜಯ ಸಾಯಿ" ಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಾಯಿಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.



ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment