ಶ್ರೀ ಸಾಯಿಬಾಬಾ ಸಂಸ್ಥಾನವು ಶಿರಡಿಯ ಲಯನ್ಸ್ ಕ್ಲಬ್ ನ ಸಹಯೋಗದೊಂದಿಗೆ ಶ್ರೀ ಸಾಯಿನಾಥ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಶಿಬಿರವನ್ನು ಆಯೋಜಿಸಿತ್ತು. ಈ ಶಿಬಿರದಲ್ಲಿ ಒಟ್ಟು 53 ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು ಎಂದು ಶ್ರೀ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ರಾಜೇಂದ್ರ ಜಾಧವ್ ರವರು ಇದೇ ತಿಂಗಳ 2ನೇ ಮೇ 2015, ಶನಿವಾರ ದಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ.ಜಾಧವ್ ರವರು ಶ್ರೀ ಸಾಯಿಬಾಬಾ ಸಂಸ್ಥಾನವು ಶಿರಡಿಯ ಲಯನ್ಸ್ ಕ್ಲಬ್ ನ ಸಹಯೋಗದೊಂದಿಗೆ ಶ್ರೀ ಸಾಯಿನಾಥ ಆಸ್ಪತ್ರೆಯಲ್ಲಿ ಕಳೆದ ತಿಂಗಳ 29ನೇ ಏಪ್ರಿಲ್ 2015 ಮತ್ತು 30ನೇ ಏಪ್ರಿಲ್ 2015 ರಂದು ಉಚಿತ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಶಿಬಿರವನ್ನು ಆಯೋಜಿಸಿತ್ತು ಹಾಗೂ ಈ ಶಿಬಿರದಲ್ಲಿ ಪ್ರಖ್ಯಾತ ನೇತ್ರ ತಜ್ಞರಾದ ಡಾ.ಸುನೀಲ್ ಸೊಂಟಕ್ಕೆಯವರು 53 ಬಡ ಹಾಗೂ ಅರ್ಹ ರೋಗಿಗಳಿಗೆ ಉಚಿತವಾಗಿ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿ ಮುಗಿಸಿದರು. ಈ ಶಿಬಿರದಲ್ಲಿ ಶಿರಡಿಯ ಲಯನ್ಸ್ ಕ್ಲಬ್ ನ ಸದಸ್ಯರುಗಳಾದ ಶ್ರೀ.ವಿಶಾಲ್ ತಿಡ್ಕೆ, ಡಾ.ರವೀಂದ್ರ ಅಂತ್ರೆ, ಶ್ರೀ.ವಾಲ್ಮೀಕ್ ತುರ್ಕಣೆ ಮತ್ತು ಶ್ರೀ.ಕಮಲೇಶ್ ಘಡಿವಾಲ್ ರವರುಗಳು ಕೂಡ ಸಕ್ರೀಯವಾಗಿ ಭಾಗವಹಿಸಿದ್ದರು ಎಂದು ತಿಳಿಸಿದರು.
ಶ್ರೀ ಸಾಯಿನಾಥ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಪ್ರಭಾಕರ್ ರಾವ್, ವೈದ್ಯಕೀಯ ಅಧೀಕ್ಷಕರಾದ ಡಾ.ಕೌಶಿಕ್ ಕುಮಾರ್ ಮಕ್ವಾನ, ನೇತ್ರ ತಜ್ಞರಾದ ಡಾ.ಸುನೀಲ್ ಸೊಂಟಕ್ಕೆ ಹಾಗೂ ಶ್ರೀ ಸಾಯಿನಾಥ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರುಗಳು ವಿಶೇಷ ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಿ ಶಿಬಿರವು ಅತ್ಯಂತ ಯಶಸ್ವಿಯಾಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು.
ಮರಾಠಿಯಿಂದ ಆಂಗ್ಲ ಭಾಷೆಗೆ: ಶ್ರೀ.ನಾಗರಾಜ್ ಅನ್ವೇಕರ್, ಬೆಂಗಳೂರು
ಕನ್ನಡ ಅನುವಾದ: ಶ್ರೀಕಂಠ ಶರ್ಮ
No comments:
Post a Comment